ಹುಬ್ಬಳ್ಳಿ: ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರು ಮಂಗಳವಾರ ಕೋವಿಡ್ ನ ಮೊದಲ ಡೋಸ್ ಲಸಿಕೆ ಪಡೆದರು.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊವ್ಯಾಕ್ಸಿನ್ ಚುಚ್ಚುಮದ್ದು ಸ್ವೀಕರಿಸಿದ ಶಾಸಕ ಪ್ರಸಾದ ಅಬ್ಬಯ್ಯ ಅವರು, ಕೊರೋನಾ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಲಸಿಕೆ ಪಡೆಯುವುದು ಅತ್ಯವಶ್ಯವಿದ್ದು, ಪ್ರತಿಯೊಬ್ಬರೂ ಲಸಿಕೆ ಸ್ವೀಕರಿಸಿ, ಕೊರೋನಾ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದರು.
