Home / Top News / ಇಂದು ರಾಜ್ಯಕ್ಕೆ ಬ್ಲ್ಯಾಕ್ ಫಂಗಸ್ ಔಷಧಿ ಪೂರೈಕೆಯಾಗುತ್ತದೆ : ಪ್ರಹ್ಲಾದ್ ‌ಜೋಶಿ

ಇಂದು ರಾಜ್ಯಕ್ಕೆ ಬ್ಲ್ಯಾಕ್ ಫಂಗಸ್ ಔಷಧಿ ಪೂರೈಕೆಯಾಗುತ್ತದೆ : ಪ್ರಹ್ಲಾದ್ ‌ಜೋಶಿ

Spread the love

ಹುಬ್ಬಳ್ಳಿ : ಇಂದು ರಾಜ್ಯಕ್ಕೆ ಬ್ಲ್ಯಾಕ್ ಫಂಗಸ್ ಔಷಧಿ ಪೂರೈಕೆಯಾಗುತ್ತದೆ. ಇಡೀ ದೇಶದಲ್ಲಿ ಇದ್ದ 50 ರಿಂದ 60 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಇದೀಗ ಸಾವಿರಾರು ಸಂಖ್ಯೆಯಲ್ಲಿ ಹೆಚ್ಚಾಗುತ್ತಿವೆ. ಇದಕ್ಕೆ ಬೇಕಾದಂತಹ ಔಷಧಿ ಇರಲಿಲ್ಲ. ಹೀಗಾಗಿ ಈ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಪ್ರಯತ್ನ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿ ಹೇಳಿದರು.
ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿನಗರದಲ್ಲಿಂದು ಮಾತನಾಡಿದ ಅವರು, ಹಂತ ಹಂತವಾಗಿ ಎಲ್ಲ ರಾಜ್ಯಗಳಿಗೂ ಔಷಧಿ ಪೂರೈಕೆ ಮಾಡಲಾಗುತ್ತದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ಸದಾನಂದಗೌಡ, ಔಷಧಿ ಉಸ್ತುವಾರಿ ಮನ್ಸುಖ್ ಮಾಂಡವೆ ಅವರ ಜೊತೆ ಚರ್ಚೆ ಮಾಡಿದ್ದಾರೆ ಎಂದರು. ಕೇಂದ್ರ ಸಚಿವ ಸದಾನಂದಗೌಡಸಿದ್ದರಾಮಯ್ಯ ಲೆಟರ್ ವಾರ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯನವರೇ ಈ ಹಿಂದೆ ಡಿಸಿಗಳ ಜತೆ ವಿಪಕ್ಷ ನಾಯಕರು ಸಭೆ ನಡೆಸಬಾರದು ಎಂಬ ಸುತ್ತೋಲೆ ಹೊರಡಿಸಿದ್ದರು. ಬಿಎಸ್​ವೈ ಹಾಗೂ ಜಗದೀಶ್​​ ಶೆಟ್ಟರ್ ವಿಪಕ್ಷ ನಾಯಕರಾಗಿದ್ದಾಗ ಸಭೆ ನಡೆಸಲು ಅವಕಾಶ ನೀಡಿರಲಿಲ್ಲ. ಈಗ ಅವರ ಸುತ್ತೋಲೆಯಂತೆ ಸಿದ್ದರಾಮಯ್ಯನವರು ನಡೆದುಕೊಳ್ಳಲಿ ಎಂದು ಟಾಂಗ್ ನೀಡಿದರು.

About Santosh Naregal

Check Also

ವಾಣಿಜ್ಯ ನಗರಿಯಲ್ಲಿ ಅಪರಾದ ಕೃತ್ಯ ಹಿನ್ನೆಲೆಯಲ್ಲಿ ರೌಡಿ ಪರೇಡ್

Spread the loveಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಚಟುವಟಿಕೆಗಳ ಹೆಚ್ಚಳ ಹಿನ್ನೆಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ …

Leave a Reply

Your email address will not be published. Required fields are marked *

[the_ad id="389"]