Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಕಸ ಹಾಕಲು ಹೋದ ವ್ಯಕ್ತಿ ನಾಲೆಗೆ ಬಿದ್ದು ಸಾವು

ಕಸ ಹಾಕಲು ಹೋದ ವ್ಯಕ್ತಿ ನಾಲೆಗೆ ಬಿದ್ದು ಸಾವು

Spread the love

ಹುಬ್ಬಳ್ಳಿ: ನಗರದ ಹೆಗ್ಗೇರಿ ಕಾಲುವೆಯಲ್ಲಿ ಸಿಕ್ಕ‌ ಮೃತ ದೇಹದ ಗುರುತು ಪತ್ತೆಯಾಗಿದೆ.‌ ಮೃತ ವ್ಯಕ್ತಿ ಜಗದೀಶ ನಗರದ ಶಂಕರಪ್ಪ ಕಟ್ಟಿಮನಿ (45) ವ್ಯಕ್ತಿ ಎಂದು ಗುರುತಿಸಲಾಗಿದೆ.‌ಕೂಲಿ ಕಾರ್ಮಿಕರಾಗಿದ್ದ ಶಂಕರಪ್ಪ ಅವರು, ನಿನ್ನೆ ಮಧ್ಯಾಹ್ನ ಮನೆ ಸಮೀಪದ ರೇಣುಕಾ ದೇವಸ್ಥಾನ ಎದುರಿಗೆ ಇರುವ ನಾಲೆಗೆ ಕಸ ಎಸೆಯಲು ಹೋಗಿದ್ದಾರೆ. ಈ ವೇಳೆ ಕಾಲುಜಾರಿ ಆಯತಪ್ಪಿ ನಾಲೆಗೆ ಬಿದ್ದು, ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರೊಬ್ಬರು ಠಾಣೆಗೆ ಕರೆ ಮಾಡಿ ತಿಳಿಸಿದರು ಎಂದು ಪೊಲೀಸರು ಹೇಳಿದರು.

ಕೂಡಲೇ ಸ್ಥಳಕ್ಕೆ ಹೋಗಿ ಸ್ಥಳೀಯರ ನೆರವಿನಿಂದ ಶೋಧ ಕಾರ್ಯಾಚರಣೆ ಕೈಗೊಳ್ಳಲಾಯಿತು. 3 ಗಂಟೆ ಸುಮಾರಿಗೆ ಹೆಗ್ಗೇರಿ ಸ್ಮಶಾನದ ಬಳಿ ಇರುವ ರಸ್ತೆ ಸೇತುವೆ ಬಳಿ ಮೃತ ಸ್ಥಿತಿಯಲ್ಲಿ ಶಂಕರಪ್ಪ ಪತ್ತೆಯಾದರು.

ಮಳೆಯಿಂದಾಗಿ ನಾಲೆಯಲ್ಲಿ ನೀರಿನ ಹರಿವು ಜೋರಾಗಿದ್ದರಿಂದ ಸೇತುವೆ ತನಕ ಕೊಚ್ಚಿಕೊಂಡು ಬಂದಿದ್ದರು. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಯಿತು ಎಂದು ತಹಶೀಲ್ದಾರ್ ಶಶಿಧರ ಮಾಡ್ಯಾಳ ಮಾಹಿತಿ ನೀಡಿದ್ದಾರೆ. ಶಂಕರಪ್ಪ ಅವರ ಮರಣೋತ್ತರ ಪರೀಕ್ಷೆ ವರದಿ ಆಧರಿಸಿ, ಅವರ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ನಿರ್ಧರಿಸಲಾಗುವುದು ಎಂದಿದ್ದಾರೆ.

About Santosh Naregal

Check Also

ಹುಬ್ಬಳ್ಳಿ ಬಸ್ ನಿಲ್ದಾಣದ ಕಾರ್ಗೋ ಕೇಂದ್ರಕ್ಕೆ ಕೆ.ಎಸ್.ಆರ್.ಟಿ.ಸಿ.ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಭೇಟಿ

Spread the loveಸಾರಿಗೆ ಸಂಸ್ಥೆಗಳಲ್ಲಿ ಪರ್ಯಾಯ ಆದಾಯ ಮೂಲವಾಗಿ ಆರಂಭಿಸಲಾಗಿರುವ ಕಾರ್ಗೋ ಸೇವೆಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ವಾಣಿಜ್ಯ ಮಳಿಗೆಗಳು …

Leave a Reply

Your email address will not be published. Required fields are marked *

[the_ad id="389"]