Spread the love
ಹುಬ್ಬಳ್ಳಿ : ಕಾರ್ ಮತ್ತೇ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಏಳು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ಗಬ್ಬೂರ ಬೈಪಾಸ್ ಬಳಿ ನಡೆದಿದೆ.
ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ಲಾರಿ ಹಾಗೂ ಹಾವೇರಿ ಕಡೆಗೆ ಹೋಗುತ್ತಿದ್ದ ಕಾರ್ ನಡುವೆ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವಾಹನದ ಬಗ್ಗೆ ಹಾಗೂ ಗಾಯಗೊಂಡಿರುವವರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಘಟನೆ ಬೆಂಡಿಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.