Home / ರಾಜಕೀಯ / ರಾಜ್ಯ ಸರ್ಕಾರ ಭ್ರಷ್ಟಾಚಾರದ ವಾಸನೆ ಹೊಡೀತಾಯಿದೆ : ಸಿದ್ದರಾಮಯ್ಯ ಆರೋಪ

ರಾಜ್ಯ ಸರ್ಕಾರ ಭ್ರಷ್ಟಾಚಾರದ ವಾಸನೆ ಹೊಡೀತಾಯಿದೆ : ಸಿದ್ದರಾಮಯ್ಯ ಆರೋಪ

Spread the love

ಹುಬ್ಬಳ್ಳಿ : ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸರ್ಕಾರಕ್ಕೆ ಮಾನ, ಮರ್ಯಾದೆ, ನಾಚಿಕೆ ಇಲ್ಲವೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ‌.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಕೋವಿಡ್ ಹೆಸರಿನಲ್ಲಿ ಭ್ರಷ್ಟಾಚಾರ ಮಾಡಲು ಅನುಕೂಲ ಮಾಡಿಕೊಟ್ಟಿದೆ. ಈ ಸಂದರ್ಭದಲ್ಲಿ ಪ್ರತಿಪಕ್ಷಗಳು ಸಹ ವಿರೋಧ ಮಾಡುವುದು, ಪ್ರತಿಭಟನೆ ಮಾಡೋಕ್ಕೆ ಬರಲ್ಲ ಎನ್ನುವುದು ಗೊತ್ತಿದೆ. ಹೀಗಾಗಿ ಸರ್ಕಾರ ಆಡಿದೆ ಆಟವಾಗಿದೆ ಎಂದರು.

ಮಂಡ್ಯ ಸಂಸದೇ ಸುಮಲತಾ ಕುಮಾರಸ್ವಾಮಿ ಅವರ ಪುತ್ರನನ್ನು ಸೋಲಿಸಿದಕ್ಕೆ ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ. ಸುಮಲತಾ ಕೆಆರ್ ಎಸ್ ಡ್ಯಾಮ್ ಬಿರುಕು ಬಿಟ್ಟಿದೆ. ಕೆಆರ್ ಎಸ್ ಸುತ್ತಮುತ್ತಲಿನ 20 ಕಿ.ಮೀ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ, ಇದರಲ್ಲಿ ಜೆಡಿಎಸ್ ನಾಯಕರ ಗಣಿ ಕಂಪನಿಗಳಿವೆ ಎಂದು ಆರೋಪ ಮಾಡಿದ್ದಾರೆ. ಆದರೆ ಈ ಬಗ್ಗೆ ಸರ್ಕಾರ, ಗಣಿ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಬೇಕಿತ್ತು. ಆದರೆ ಸರ್ಕಾರ ಸುಮ್ಮನೆ ಇರುವುದನ್ನು ನೋಡಿದ್ರೆ ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಭಾಗಿಯಾಗಿದೆ ಎಂಬ ಅನುಮಾನಕ್ಕೆ ಕಾರಣವಾಗಿದೆ ಎಂದರು.

ನನಗೆ ಈಗಾಗಲೇ ಹಲವಾರು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವಂತೆ ಆಹ್ವಾನ ಬಂದಿರೋದು ನಿಜ ಆದರೆ ನಾನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸುವೆ ಎಂದರು‌.

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಉಪಚುನಾವಣೆಗೆ ದಿನಾಂಕ ಘೋಷಣೆಯಾದ ನಂತರ ಅಭ್ಯರ್ಥಿ ಘೋಷಣೆ ಮಾಡುತ್ತೇವೆ. ಜಾತಿ ಸಮೀಕ್ಷೆ ನಡೆದು ಎರಡೂವರೆ ವರ್ಷ ಆಯ್ತು‌. ಅದರ ವರದಿಯನ್ನು ಸಲ್ಲಿಕೆ ಮಾಡಲಾಗಿದೆ ‌ ಆ ಕುರಿತು ಸದನದಲ್ಲಿ ಚರ್ಚೆ ಆಗುತ್ತಿಲ್ಲ. ಚರ್ಚೆ ಮಾಡಿದ್ರೆ ಸಾಮಾಜಿಕ ನ್ಯಾಯ ಒದಗಿಸಬೇಕಾಗುತ್ತದೆ‌ ಹೀಗಾಗಿ ಸರ್ಕಾರ ಈ ಬಗ್ಗೆ ಚರ್ಚೆ ನಡೆಸುತ್ತಿಲ್ಲ ಎಂದರು.

About Santosh Naregal

Check Also

101 ಚೀಲ ಅಕ್ಕಿ ಸಿದ್ಧಾರೂಢ ಮಠಕ್ಕೆ ಸಮರ್ಪಣೆ ಮಾಡಿದ ಜೆ ಜಿ ಕಾಲೇಜ್ ಎನ್ಎಸ್ಎಸ್ ಕಾರ್ಯಕರ್ತರ

Spread the loveಹುಬ್ಬಳ್ಳಿ – ಹನಿ ಹನಿ ಕೂಡಿದರೆ ಹಳ್ಳ ಅಂತಾರೆ. ಅದರಂತೆ ಹುಬ್ಬಳ್ಳಿಯ ವಿದ್ಯಾರ್ಥಿಗಳು ಒಂದು ಮುಷ್ಟಿ ಅಕ್ಕಿ …

Leave a Reply

Your email address will not be published. Required fields are marked *