Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಉತ್ತರ ಕರ್ನಾಟಕಕ್ಕೆ ಚೆನ್ನಮ್ಮನ ಕರ್ನಾಟಕವೆಂದು ನಾಮಕರಣ ಮಾಡಲು ಕೈ ವಕ್ತಾರ ಗಂಗಾಧರ ದೊಡ್ಡವಾಡ ಒತ್ತಾಯ

ಉತ್ತರ ಕರ್ನಾಟಕಕ್ಕೆ ಚೆನ್ನಮ್ಮನ ಕರ್ನಾಟಕವೆಂದು ನಾಮಕರಣ ಮಾಡಲು ಕೈ ವಕ್ತಾರ ಗಂಗಾಧರ ದೊಡ್ಡವಾಡ ಒತ್ತಾಯ

Spread the love

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ತಮ್ಮ ಅಧಿಕಾರವಧಿಯಲ್ಲಿ ಹೈದರಾಬಾದ್ ಕರ್ನಾಟಕದ ಬೀದರ್, ಯಾದಗಿರಿ, ಗುಲ್ಬರ್ಗಾ, ಬಿಜಾಪುರ, ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳನ್ನು ಸೇರಿಸಿ ಕಲ್ಯಾಣ ಕರ್ನಾಟಕವೆಂದು ಮರು ನಾಮಕರಣ ಮಾಡಿ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಹೊಸದೊಂದು ಚರಿತ್ರೆಯನ್ನು ಬರೆದಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರ ಗಂಗಾಧರ ದೊಡವಾಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿ ಅದೇ ರೀತಿ ಉತ್ತರ ಕರ್ನಾಟಕದ ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳನ್ನು ಸೇರಿಸಿ *ಚೆನ್ನಮ್ಮನ ಕರ್ನಾಟಕ* ಎಂದು ಮರು ನಾಮಕರಣ ಮಾಡಬೇಕೆಂದು ನೂತನ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಯವರನ್ನು ಒತ್ತಾಯಿಸಿದ್ದಾರೆ ಸ್ವಾತಂತ್ರ್ಯದ ಬೆಳ್ಳಿಚುಕ್ಕಿ ಮಹಿಳಾ ಕುಲಕ್ಕೆ ಸ್ಫೂರ್ತಿಯಾಗಿರುವ ಕಿತ್ತೂರ ನಾಡಿನ ಸಾಮ್ರಾಜ್ಞೆ ಚೆನ್ನಮ್ಮ ತಾಯಿಯವರ ಹೆಸರನ್ನು ಅಜರಾಮರವಾಗಿಸುವ ನಿಟ್ಟಿನಲ್ಲಿ ತಕ್ಷಣವೇ ಕ್ರಮ ಕೈಗೊಂಡು *ಚೆನ್ನಮ್ಮನ ಕರ್ನಾಟಕ* ವೆಂದು ಮರುನಾಮಕರಣ ಮಾಡಿ ಈ ನೆಲದ ಸ್ವಾತಂತ್ರ್ಯಕ್ಕಾಗಿ ಆಂಗ್ಲ ರೊಂದಿಗೆ ಸೆಣಸ್ಯಾಡಿ ತಮ್ಮ ಸರ್ವಸ್ವವನ್ನೇ ಕಳೆದುಕೊಂಡ ಮಹಾನ್ ದೇಶಭಕ್ತರಿಗೆ ಈ ತೆರನಾದ ಗೌರವ ಸಲ್ಲಿಸಬೇಕೆಂದು ಗಂಗಾಧರ ದೊಡವಾಡ ಪತ್ರಿಕಾ ಪ್ರಕಟಣೆಯ ಮೂಲಕ ಒತ್ತಾಯಿಸಿದ್ದಾರೆ.

About Santosh Naregal

Check Also

ವಾಣಿಜ್ಯ ನಗರಿಯಲ್ಲಿ ಅಪರಾದ ಕೃತ್ಯ ಹಿನ್ನೆಲೆಯಲ್ಲಿ ರೌಡಿ ಪರೇಡ್

Spread the loveಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಚಟುವಟಿಕೆಗಳ ಹೆಚ್ಚಳ ಹಿನ್ನೆಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ …

Leave a Reply

Your email address will not be published. Required fields are marked *

[the_ad id="389"]