Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಶಾಲೆಗಳು ಮತ್ತೆ ಆರಂಭ ಇದು ಸರ್ಕಾರದ ಜವಾಬ್ದಾರಿ ನಡೆ : ಆರೋಗ್ಯ ಸಚಿವ ಸುಧಾಕರ್

ಶಾಲೆಗಳು ಮತ್ತೆ ಆರಂಭ ಇದು ಸರ್ಕಾರದ ಜವಾಬ್ದಾರಿ ನಡೆ : ಆರೋಗ್ಯ ಸಚಿವ ಸುಧಾಕರ್

Spread the love

ಹುಬ್ಬಳ್ಳಿ : ವಿದ್ಯಾರ್ಥಿಗಳ ಕಲಿಕೆ ಈಗಾಗಲೇ ನಿಂತುಹೋಗಿದೆ, ಹೀಗಾಗಿ ಸರ್ಕಾರದ್ದು ಅತ್ಯಂತ ಜವಾಬ್ದಾರಿ ನಡೆ ಇದೆ.
ಶಾಲೆಗಳಲ್ಲಿ 1 ಪ್ರತಿಶತಕ್ಕಿಂತ ಹೆಚ್ಚು ಪ್ರಕರಣಗಳು ಕಂಡುಬಂದರೆ ಅಂತಹ ಶಾಲೆಗಳನ್ನ ಬಂದ್ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.

ನಗರದಲ್ಲಿಂದು ಕಿಮ್ಸ್ ಆಸ್ಪತ್ರೆಯಲ್ಲಿ ಮಾತನಾಡಿದ ಅವರು, ಹಲವು ಮಾರ್ಗಸೂಚಿಗಳನ್ನ ಇಟ್ಟುಕೊಂಡು ಇದೀಗ ಶಾಲೆಗಳನ್ನ‌ ಆರಂಭಿಸಲಾಗಿದೆ.
ಇಂದಿನಿಂದ 1 ರಿಂದ 5 ನೇ ತರಗತಿ ಶಾಲಾ ಆರಂಭಿಸಲಾಗಿದೆ.
ಕೆಲವು ದೇಶಗಳಲ್ಲಿ ಈಗಾಗಲೇ 3 ನೇ ಅಲೆ ಕುರಿತು ಮಾತುಗಳು ಕೇಳಿಬರುತ್ತಿದೆ.‌ ರಷ್ಯಾ, ಇಂಗ್ಲೆಂಡ್ ನಲ್ಲಿ ಅದೇ ರೀತಿ ದೇಶದ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಕರೋನಾ ಹೊಸ ತಳಿ ಬಂದಿದೆ ಎಂಬ ವರದಿ ಬಂದಿದೆ. ಹೀಗಾಗಿ ನಮ್ಮ ತಜ್ಞರ ಮತ್ತು ತಾಂತ್ರಿಕ ಸಿಬ್ಬಂಧಿ ಜೊತೆ ಮಾತನಾಡಿದ್ದೇನೆ.
ಹೊಸ ತಳಿಯ ಲಕ್ಷಣಗಳ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ನಮ್ಮ ಗಮನಕ್ಕೆ ತರಲು ಸೂಚಿಸಿದ್ದೇನೆ.
ಈ‌ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ .
ಮೊದಲ ಡೋಸ್ ವ್ಯಾಕ್ಸಿನ್ ಪಡೆದವರು ಎರಡನೇ ಡೋಸ್ ಕಡ್ಡಾಯ ಪಡೆದುಕೊಳ್ಳಬೇಕು‌
ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಜಾಸ್ತಿ ಇರುತ್ತೆ 4 ತಿಂಗಳಿನಿಂದಲೂ ಶಾಲೆಗಳು ಆರಂಭವಾಗಿದ್ದರೂ ಈವರೆಗೆ ಮಕ್ಕಳಲ್ಲಿ ಅಂತಹ ಆತಂಕ ಕಂಡುಬಂದಿಲ್ಲ. ಮಕ್ಕಳಲ್ಲಿ‌ ಗಂಭೀರ ಸಮಸ್ಯೆಗಳು ಕಾಣಿಸಿಕೊಂಡಿಲ್ಲ ಎಂದರು.

About Santosh Naregal

Check Also

ಮೇಲ್ಮನೆ ಚುನಾವಣೆ: ಕಾಂಗ್ರೆಸ್ ಗೆಲುವು ನಿಶ್ಚಿತ-ಹರಿಪ್ರಸಾದ

Spread the loveಹುಬ್ಬಳ್ಳಿ,  : ಹಾನಗಲ್ ಉಪ ಚುನಾವಣೆಯಲ್ಲಿ ಮತದಾರರು ಜನ ಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸದ ಸರ್ಕಾರದ ವಿರುದ್ಧ …

Leave a Reply

Your email address will not be published. Required fields are marked *