Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಐಟಿ, ಇಡಿ ದಾಳಿ ನಡೆಯುತ್ತಿವೆ-ಲಕ್ಷ್ಮಿ ಹೆಬ್ಬಾಳ್ಕರ್

ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಐಟಿ, ಇಡಿ ದಾಳಿ ನಡೆಯುತ್ತಿವೆ-ಲಕ್ಷ್ಮಿ ಹೆಬ್ಬಾಳ್ಕರ್

Spread the love

ಬಿಜೆಪಿಯವರು ಅಧಿಕಾರಕ್ಕೆ ಬಂದನಂತರ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಐಟಿ ಇಡಿ ಹಾಗೂ ಸಿಬಿಐಗಳಿಂದ ದಾಳಿ ನಡೆಯುತ್ತಿವೆ. ಈಗ ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಧಾರವಾಡದಲ್ಲಿ ಶೆಟ್ಟಿ ಅನ್ನುವ ಗುತ್ತಿಗೆದಾರರ ಮೇಲೆ ಐಟಿ ದಾಳಿ ನಡೆದಿರುವುದು ದುರದೃಷ್ಟಕರ.‌ ನಮ್ಮ ಪಕ್ಷದ ನಾಯಕರ ಹಾಗೂ ಕಾರ್ಯಕರ್ತರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಲು ಬಿಜೆಯವರು ಈ ರೀತಿ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆ ನಾವು ಹೆದರುವುದಿಲ್ಲ ಎಂದು ಕಾಂಗ್ರೆಸ್ ಶಾಸಕಿ‌ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ‌

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧಾರವಾಡದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆಪ್ತ ಯು ಬಿ‌ ಶೆಟ್ಟಿ ಮನೆಯ ಮೇಲೆ ಐಟಿ ದಾಳಿಗೆ ಪ್ರತಿಕ್ರಿಯಿಸಿ ಬಿಜೆಪಿಯವರು ನಮ್ಮ ಪಕ್ಷದ ಕಾರ್ಯಕರ್ತರ ಸೇರಿದಂತೆ ನಾಯಕರಲ್ಲಿ ಭಯ ಸೃಷ್ಟಿಸುವ ರಾಜಕಾರಣ ಮಾಡುತ್ತಿದ್ದಾರೆ. ಎಲ್ಲ ರಾಜ್ಯಗಳಲ್ಲಿ ಈ ರೀತಿ ಆಗುತ್ತಿದೆ. ಇಡಿ, ಐಟಿಗೆ ನಾವು ಹೆದರುವುದಿಲ್ಲ. ಇದಾವುದು ಕೂಡ ರಾಜ್ಯದಲ್ಲಿ ನಡೆಯುತ್ತಿರು ಎರಡು ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರಲ್ಲ ಎಂದರು.

ಮೊದಲಿಂದಲೂ ಡಿಕೆಶಿವಕುಮಾರ್​ ಜೊತೆಗೆ ಶೆಟ್ಟಿಯವರ ಗುರುತಿಸಿಕೊಂಡಿದ್ದಾರೆ. ನಮ್ಮ ಕಾರ್ಯಕರ್ತರ ನೈತಿಕತೆ ಕಡಿಮೆ ಮಾಡಲು ಬಿಜೆಪಿಯವರು ಈ ರೀತಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

About Santosh Naregal

Check Also

ಸಾರ್ವಜನಿಕ ಗಣೇಶ ಮಂಡಳಿಗಳಿಗೆ 2 ಕೆಜಿ ಬೆಳ್ಳಿ ನಾಣ್ಯಗಳು ವಿತರಣೆಗೆ : ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಚಾಲನೆ

Spread the loveಹುಬ್ಬಳ್ಳಿ : ನಗರದಲ್ಲಿಂದು ಇದೇ ಮೊದಲ ಬಾರಿಗೆ ರಜತ ಉಳ್ಳಾಗಡ್ಡಿಮಠ ಫೌಂಡೇಶನ್ ಅಯೋಜಿಸಿದ 200 ಸಾರ್ವಜನಿಕರ ಗಣೇಶ …

Leave a Reply

Your email address will not be published. Required fields are marked *

[the_ad id="389"]