Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ವೀರಾಪುರ ಓಣಿಯಲ್ಲಿ ಗ್ರಾಮದೇವಿ ದೇವಸ್ಥಾನ ಲೋಕಾರ್ಪಣೆ

ವೀರಾಪುರ ಓಣಿಯಲ್ಲಿ ಗ್ರಾಮದೇವಿ ದೇವಸ್ಥಾನ ಲೋಕಾರ್ಪಣೆ

Spread the love

ಹುಬ್ಬಳ್ಳಿ- ಇಂದು ಬ್ರಾಹ್ಮೀ ಮುಹೂರ್ತದಲ್ಲಿ, ನಗರದ ವೀರಾಪುರ ಓಣಿಯಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಗ್ರಾಮದೇವಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಶ್ರೀ ಗ್ರಾಮದೇವತೆಯರಾದ ಶ್ರೀ ದ್ಯಾಮವ್ವ, ದುರ್ಗಮ್ಮದೇವಿ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಕಾರ್ಯಕ್ರಮವನ್ನು ಭಕ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು.

ದೇವಸ್ಥಾನದಲ್ಲಿ ಗಣಹೋಮ ವಾಸ್ತು ಹೋಮ, ನವಗ್ರಹ ಹೋಮ , ಶಾಂತಿ ಹೋಮ, ಹವನ ಮೂಲಕ ವಿಶೇಷ ಪೂಜೆಯನ್ನು ಮಾಡಲಾಯಿತು. ಗಾಳಿದುರ್ಗಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಶ್ರೀ ಗ್ರಾಮ ದೇವತೆಯರ ಮೂರ್ತಿಯ ಮಹಾಪೂಜೆ, ಸುಮಂಗಲೆಯರಿಂದ ಪೂರ್ಣ ಕುಂಭ ಮೇಳ, ಹಾಗೂ ಸಕಲ ವಾದ್ಯಗಳೊಂದಿಗೆ ಭವ್ಯ ಮೆರವಣಿಗೆ ಮುಖಾಂತರ ಶ್ರೀ ಗ್ರಾಮದೇವತೆಯರ ಮೂರ್ತಿಯನ್ನು ದೇವಸ್ಥಾನಕ್ಕೆ ತರಲಾಯಿತು.

About Santosh Naregal

Check Also

ಮೇಲ್ಮನೆ ಚುನಾವಣೆ: ಕಾಂಗ್ರೆಸ್ ಗೆಲುವು ನಿಶ್ಚಿತ-ಹರಿಪ್ರಸಾದ

Spread the loveಹುಬ್ಬಳ್ಳಿ,  : ಹಾನಗಲ್ ಉಪ ಚುನಾವಣೆಯಲ್ಲಿ ಮತದಾರರು ಜನ ಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸದ ಸರ್ಕಾರದ ವಿರುದ್ಧ …

Leave a Reply

Your email address will not be published. Required fields are marked *