Home / Top News / ಕಾಂಗ್ರೆಸ್ ಪಾದಯಾತ್ರೆ: ಇಷ್ಟು ದಿನ ಮಲಗಿದ್ದರಾ ಇವರು..? ಜಗದೀಶ್ ಶೆಟ್ಟರ್ ಕಿಡಿ

ಕಾಂಗ್ರೆಸ್ ಪಾದಯಾತ್ರೆ: ಇಷ್ಟು ದಿನ ಮಲಗಿದ್ದರಾ ಇವರು..? ಜಗದೀಶ್ ಶೆಟ್ಟರ್ ಕಿಡಿ

Spread the love

ಹುಬ್ಬಳ್ಳಿ : ಚುನಾವಣೆ ಬರ್ತಿದೆ ಎಂದು ಕಾಂಗ್ರೆಸ್ ರಾಜಕಾರಣ ಆರಂಭಿಸಿದೆ,ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಈ ಹಿಂದೆ ಸರಕಾರ ನಡೆಸಿದವರು ಈಗ ಮೇಕೆ ದಾಟು ವಿಚಾರ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು.

ನಗರದಲ್ಲಿಂದು ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಮೇಕೆ ದಾಟು ವಿಚಾರದಲ್ಲಿ ಕಾನೂನು ತೊಡಕುಗಳು ಇರುವುದರಿಂದ ವಿಳಂಬವಾಗಿದೆ,ಈ ವಿಚಾರವಾಗಿ ಎಲ್ಲರೂ ಒಂದು ಕಡೆ ಕುಳಿತು ಚರ್ಚೆ ಮಾಡಬೇಕು ,ಎಲ್ಲರೂ ಸೇರಿ ಸರ್ವಸಮ್ಮತವಾದ ನಿರ್ಣಯ ಕೈಗೊಳ್ಳಬೇಕು ಅಂದಾಗ ಮಾತ್ರ ಸಮಸ್ಯೆ ಇತ್ಯರ್ಥವಾಗುತ್ತದೆ,ಅದರಲ್ಲಿಯೂ ತಮಿಳನಾಡು ವಿರುದ್ಧದ ಹೋರಾಟ ಮಾಡಿ ಜಾರಿಗೆ ತರಬೇಕು ಅಂದರೆ ಎಲ್ಲ ಪಕ್ಷಗಳ ಸಹಕಾರ ಅತ್ಯಗತ್ಯ,ಇದನ್ನು ರಾಜಕೀಕರಣ ಮಾಡಿದರೆ ಇದರ ಲಾಭವನ್ನು ಬೇರೆ ರಾಜ್ಯಗಳು ಪಡೆಯುತ್ತವೆ ,
ಮೇಕೆದಾಟು ಯೋಜನೆ ಕರ್ನಾಟಕದ ಹಕ್ಕು
ಈ ಅಭಿಪ್ರಾಯಕ್ಕೆ ಎಲ್ಲ ಪಕ್ಷಗಳೂ ಬದ್ಧವಾಗಿವೆ.ಕಾನೂನು ತೊಡಕನ್ನು ನಿವಾರಿಸಿ ಇದನ್ನು ಅನುಷ್ಠಾನಕ್ಕೆ ಪ್ರಯತ್ನಿಸಬೇಕೇ ಹೊರತು ರಾಜಕೀಯ ಮಾಡುವುದು ಬೇಡ,ತಮ್ಮ ಸರ್ಕಾರವಿದ್ದಾಗ ಡಿ ಪಿ ಆರ್ ಮಾಡಿರೋದಾಗಿ ಕಾಂಗ್ರೆಸ್ ನವರು ಹೇಳ್ತಾರೆ ,ಹಾಗಿದ್ರೇ ಆಗಲೇ ಏಕೆ ಯೋಜನೆ ಜಾರಿಗೆ ತರಲಿಲ್ಲ,ಅವತ್ತು ಡಿ ಪಿ ಆರ್ ಗೆ ಅಪ್ರೂವಲ್ ಸಿಗದಿದ್ದರೆ ಅಂದೇ ಏಕೆ ಪಾದಯಾತ್ರೆ ಮಾಡಲಿಲ್ಲವಿರೋಧ ಪಕ್ಷದಲ್ಲಿದ್ದಾಗ ಒಂದು ನಡವಳಿಕೆ, ಆಡಳಿತ ಪಕ್ಷದಲ್ಲಿದ್ದಾಗ ಮತ್ತೊಂದು ನಡವಳಿಕೆ ಸರಿಯಲ್ಲ ಎಂದರು‌.ಇನ್ನೂ ಕಾಂಗ್ರೇಸ್ ಪಾದಯಾತ್ರೆ ನಾಟಕ, ರಾಜಕೀಯ ಮಾಡೋದನ್ನು ನಿಲ್ಲಿಸಲಿ,ಚುನಾವಣೆ ಹತ್ತಿರ ಇದ್ದಾಗ ಈ ರೀತಿ ಮಾಡುತ್ತಿದ್ದಾರೆ ಯಾಕೆ ಇಷ್ಟು ದಿನ ಮಲಗಿದ್ದರಾ ಇವರು..? ಎಂದು ಲೇವಡಿ ಮಾಡಿದರು.

About Santosh Naregal

Check Also

ನ.25 ರಂದು ವಧಾಲಯ, ಮಾಂಸದ ಅಂಗಡಿ ಬಂದ್

Spread the love ಹುಬ್ಬಳ್ಳಿ : ನವೆಂಬರ್ 25 ರಂದು ಸೈಂಟ್ ಟಿ.ಎಲ್. ವಾಸವಾನಿಯವರ ಜನ್ಮದಿನ ಇರುವುದರಿಂದ ಪಾಲಿಕೆಯ ಹುಬ್ಬಳ್ಳಿ …

Leave a Reply

Your email address will not be published. Required fields are marked *

[the_ad id="389"]