Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಧಾರವಾಡ ಜಿಲ್ಲೆಯ ಲಾಕ್‌ಡೌನ್ ಕುರಿತು ನಾಳೆ ತೀರ್ಮಾನ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಧಾರವಾಡ ಜಿಲ್ಲೆಯ ಲಾಕ್‌ಡೌನ್ ಕುರಿತು ನಾಳೆ ತೀರ್ಮಾನ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Spread the love

ಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಲಾಕ್‌ಡೌನ್ ಮುಂದುವರಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅಧ್ಯಕ್ಷತೆಯಲ್ಲಿ ವರ್ತಕರು, ಎಪಿಎಂಸಿ ಪ್ರತಿನಿಧಿಗಳು, ಉದ್ದಿಮೆದಾದರು, ವಿವಿಧ ವಾಣಿಜ್ಯ ಸಂಘಟನೆಗಳ ಸಭೆ ಕರೆದು ಅಭಿಪ್ರಾಯ ಪಡೆಯಲಾಗಿದೆ. ಲಾಕ್‌ಡೌನ್ ಮುಂದುವರಿಸುವ ಕುರಿತು ನಾಳೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಲಾಕ್‌ಡೌನ್ ಕುರಿತು ಜರುಗಿದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ದರ ಹೆಚ್ಚಿದೆ. ಮುಂಬರುವ ದಿನಗಳಲ್ಲಿ ಕಠಿಣ ಲಾಕ್‌ಡೌ‌ನ್ ಜಾರಿ ಮಾಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುದು. ಉದ್ದಿಮೆ ಹಾಗೂ ವ್ಯಾಪಾರ ಸ್ಥಳಗಳಲ್ಲಿ ಕೋವಿಡ್ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿರುವುದರಿಂದ ಎಲ್ಲರೂ ಗಾಬರಿಯಲ್ಲಿ ಇದ್ದಾರೆ. ಸಭೆಯಲ್ಲಿ ಬಹುತೇಕರು ಕಠಿಣ ಲಾಕ್‌ಡೌನ್‌ಗೆ ಒಲವು ತೋರಿದ್ದಾರೆ. ಸೊಂಕು ಹರಡುವ ಸರಪಳಿಯನ್ನು ಮುರಿಯಲು ಸೂಚಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಬ್ಲಾಕ್ ಫಂಗಸ್ ಬಹಳ ದೊಡ್ಡ ಪ್ರಮಾಣದಲ್ಲಿ ಕಂಡುಬರುತ್ತಿರುವದು ಆತಂಕಕಾರಿ. ಹೇಗೆ ಇದನ್ನು ನಿರ್ವವಹಿಸಬೇಕು ಎಂಬುದರ ಕುರಿತು ಚರ್ಚಿಸಲಾಗಿದೆ. ಬ್ಲಾಕ್ ಫಂಗಸ್ ರೋಗ ಮೊದಲು ಸಣ್ಣ ಪ್ರಮಾಣದಲ್ಲಿ ಇತ್ತು‌. ಸದ್ಯ ಭಯಂಕರ ಪ್ರಮಾಣದಲ್ಲಿ ಹೆಚ್ಚಾಗುತ್ತಿರುವುದರಿಂದ ಔಷಧಗಳ ಕೊರತೆಯಾಗಿದೆ. ಔಷದ ತಯಾರಿಕಾ ಕಂಪನಿಗಳು ಇಷ್ಟು ಪ್ರಮಾಣದಲ್ಲಿ ರೋಗ ಕಂಡು ಬರುವದು ಎಂದು ಅಂದಾಜು ಸಹ ಮಾಡಿರಲಿಲ್ಲ. ಅಗತ್ಯ ಔಷಧಗಳನ್ನು ತ್ವರಿತವಾಗಿ ಉತ್ಪಾದಿಸಲು, ವಿದೇಶಗಳಿಂದ ಆಮದು ಮಾಡಿಕೊಳ್ಳಲು ಪ್ರಯತ್ನ ಮಾಡಲಾಗುತ್ತಿದೆ. ಹಂತ ಹಂತವಾಗಿ ಔಷದಗಳನ್ನು ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.

*ಕೃಷಿ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲು ಮನವಿ*

ಉತ್ತಮ ಮೆಳೆಯಾಗಿದೆ. ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸುತ್ತಿದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ಬಿತ್ತನೆ ಬೀಜಗಳು, ರಸ ಗೊಬ್ಬರ ವಿತರಣೆ ಸೂಕ್ತ ಕ್ರಮ ಕೈಗೊಳಬೇಕು. ರೈತರು ಬೆಳೆದ‌ ಉತ್ಪನ್ನಗಳನ್ನು ಮಾರುಕಟ್ಟೆಗೆ ತರಲು ಅವಕಾಶ ಕಲ್ಪಿಸುವಂತೆ ಎಪಿಎಂಸಿ‌ ಸದಸ್ಯರು ಸಭೆಯಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಅಧ್ಯಕ್ಷ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ , ಶಾಸಕರಾದ ಅರವಿಂದ ಬೆಲ್ಲದ್, ಪ್ರದೀಪ್ ಶೆಟ್ಟರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ್ ಕಲ್ಬುರ್ಗಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, *ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬುರಾಮ್* ಜಿ.ಪಂ.ಸಿಇಓ ಡಾ.ಬಿ.ಸುಶೀಲ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಉಪವಿಭಾಗಾಧಿಕಾರಿ ಗೋಪಾಲಕೃಷ್ಣ, ಹುಬ್ಬಳ್ಳಿ ತಹಶೀಲ್ದಾರ್ ಶಶಿಧರ ಮಾಡ್ಯಾಳ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

About Santosh Naregal

Check Also

ಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆ

Spread the loveಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ. ಹೌದು ಇಂದು ಬೆಳಿಗ್ಗೆ ಚರಂಡಿಯಲ್ಲಿ ಅಪರಿಚಿತ ವ್ಯಕ್ತಿ …

Leave a Reply

Your email address will not be published. Required fields are marked *

[the_ad id="389"]